ಕೋಲ್ಕತ್ತಾ(ಪಶ್ಚಿಮ ಬಂಗಾಳ):ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮಗ ಅಭಿಜಿತ್ ಮುಖರ್ಜಿ ಇಂದು ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿಕೊಂಡರು. ಈ ಮೂಲಕ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಊಹಾಪೋಹಗಳಿಗೆ ಅವರು ತೆರೆ ಎಳೆದರು.
ಜಂಗೀಪುರದಿಂದ ಕಾಂಗ್ರೆಸ್ನ ಮಾಜಿ ಸಂಸದರಾಗಿದ್ದ ಅಭಿಜಿತ್ ಮುಖರ್ಜಿ ಅವರಿಗೆ ಮುಂಬರುವ ಉಪಚುನಾವಣೆಯಲ್ಲಿ ಜಂಗೀಪುರ ವಿಧಾನಸಭಾ ಸ್ಥಾನದ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಇವರ ತಂದೆ, ಮಾಜಿ ರಾಷ್ಟ್ರಪತಿ ದಿ.ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ್ ಸಂಸದೀಯ ಕ್ಷೇತ್ರದಿಂದ ಎರಡು ಸಲ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು.