ನವದೆಹಲಿ :ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಹಾವಳಿ ತೀವ್ರವಾದ ಕಾರಣ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಿಸಿದೆ. ಇದರಿಂದ ವಾರಾಂತ್ಯದ ಎರಡು ದಿನ ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಸುದ್ದಿಗಾರರ ಜೊತೆ ಮಾತನಾಡಿ ಮಾಹಿತಿ ನೀಡಿರುವ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಇಂದು(ಮಂಗಳವಾರ) 5,500 ಹೊಸ ಕೇಸ್ ಪತ್ತೆಯಾಗಿವೆ. ಪಾಸಿಟಿವಿಟಿ ದರ 8.5ಕ್ಕೆ ಏರಿಕೆ ಕಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಲಾಕ್‌ಡೌನ್ ಬದಲಾಗಿ ವೀಕೆಂಡ್ ಕರ್ಫ್ಯೂ ಮೊರೆ ಹೋಗಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳೂ ಹೆಚ್ಚಾಗಿ ಪತ್ತೆಯಾಗುತ್ತಿವೆ. ತಜ್ಞರು ಕೂಡ ಶೀಘ್ರ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಇದರಿಂದಾಗಿ ವಾರಾಂತ್ಯದ ಎರಡು ದಿನ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಜನರು ಇದನ್ನು ಲಾಕ್‌ಡೌನ್ ಎಂದು ಪರಿಗಣಿಸಬಾರದು ಎಂದು ಸಚಿವರು ತಿಳಿಸಿದ್ದಾರೆ.