ಚಂಬಾ(ಹಿಮಾಚಲ ಪ್ರದೇಶ):ಸೂಕ್ತ ರಸ್ತೆ ಸೌಲಭ್ಯವಿಲ್ಲದೇ ಗರ್ಭಿಣಿಯನ್ನು ನಾಲ್ವರು ಹೊತ್ತು ಸಾಗಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಶಾಲೇಲಾ ಬಡಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ವಿಧಾನಸಭೆ ಉಪಸಭಾಪತಿ ಹನ್ಸ್ ರಾಜ್ ಇದೇ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರು. ಆದರೆ, ಇಲ್ಲಿ ಸೂಕ್ತ ಮೂಲ ಸೌಕರ್ಯಗಳಿಲ್ಲದೇ ಜನ ಪರದಾಡುತ್ತಿದ್ದಾರೆ. ಎಷ್ಟೋ ಬಾರಿ ಹನ್ಸ್ ರಾಜ್ಗೆ ಈ ಬಗ್ಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪವಿದೆ.