ಶ್ರೀನಗರ (ಜಮ್ಮುಕಾಶ್ಮೀರ) :ಟೆಂಡರ್ ವಂಚನೆ ಆರೋಪದಲ್ಲಿ ಜಮ್ಮು ಕಾಶ್ಮೀರ ಬ್ಯಾಂಕ್ನ ಮಾಜಿ ಅಧ್ಯಕ್ಷ ಪರ್ವೇಜ್ ಅಹಮದ್ ನೆಂಗ್ರೂ ಎಂಬಾತನನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಮುಂಬೈ ಮೂಲದ ಎಸ್ಐಎಲ್ಎ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಟೆಂಡರ್ ನಿಯಮಗಳನ್ನು ಉಲ್ಲಂಘಿಸಿ, ಹೌಸ್ಕೀಪಿಂಗ್ ಟೆಂಡರ್ ನೀಡಿದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಥಿಯೇಟರ್ಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಆದೇಶ: ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಪುನೀತ್
ಈ ವಂಚನೆ ಪ್ರಕರಣದಲ್ಲಿ ಜಮ್ಮು ಕಾಶ್ಮೀರ ಬ್ಯಾಂಕ್ಗೆ ಸುಮಾರು 6,29,56,575 ಕೋಟಿ ರೂ. ನಷ್ಟವಾಗಿದೆ ಎನ್ನಲಾಗಿದ್ದು, ತನಿಖೆ ನಡೆಯುತ್ತಿದೆ. ಇದರ ಜೊತೆಗೆ ಪರ್ವೇಜ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ. ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.