ಪೂರ್ವ ಗೋದಾವರಿ(ಆಂಧ್ರಪ್ರದೇಶ):ಸಂಕ್ರಮಣ ಹಬ್ಬದ ಕಾಲದಲ್ಲಿ ವಿವಿಧ ರಾಜ್ಯಗಳಲ್ಲಿ ದೇಶಿ ಕ್ರೀಡೆಗಳು ಮೆರಗು ಪಡೆದುಕೊಳ್ಳಲು ಶುರುವಾಗುತ್ತವೆ. ಇದರಲ್ಲಿ ಪ್ರಮುಖವಾಗಿ ಖಾಲಿ ಚಕ್ಕಡಿ ಓಡಿಸುವ ಸ್ಪರ್ಧೆ ಕೂಡ ಮಹತ್ವದ್ದಾಗಿದೆ.
ಆಂಧ್ರಪ್ರದೇಶದ ಕೆಲವೊಂದು ಜಿಲ್ಲೆಗಳಲ್ಲಿ ಖಾಲಿ ಚಕ್ಕಡಿ ಓಡಿಸುವ ಸ್ಪರ್ಧೆಯನ್ನು ಈ ಅವಧಿಯಲ್ಲಿ ಆಯೋಜಿಸಲಾಗುತ್ತದೆ. ಅದೇ ರೀತಿ ಪೂರ್ವ ಗೋದಾವರಿಯ ವೆಲುಗುಬಂಧ ಗ್ರಾಮದಲ್ಲಿ ನಡೆದ ಚಕ್ಕಡಿ ಓಡಿಸುವ ಸ್ಪರ್ಧೆ ವೇಳೆ ಅಪಘಾತವೊಂದು ಸಂಭವಿಸಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.