ಭುವನೇಶ್ವರ(ಒಡಿಶಾ):ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಗಳ ಬಳಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಕೆಲವು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ.
ಅಂಡಮಾನ್ ನಿಕೋಬಾರ್ ದ್ವೀಪಗಳ ಬಳಿ ವಾಯುಭಾರ ಕುಸಿತ: ಚಂಡಮಾರುತ ಅಪ್ಪಳಿಸುವ ಸಾಧ್ಯತೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸಮೀಪ ವಾಯುಭಾರ ಕುಸಿತವಾಗಿದ್ದು, ಆಗ್ನೇಯ ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
By PTI
Published : Nov 28, 2023, 11:45 AM IST
ಸೋಮವಾರ ಬೆಳಿಗ್ಗೆ 8.30 ರವರೆಗೆ ದೊರೆತ ದತ್ತಾಂಶದ ಆಧಾರದ ಮೇಲೆ ಹವಾಮಾನ ಇಲಾಖೆಯು ಪ್ರಕಟಣೆಯ ಮೂಲಕ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಮಲಕ್ಕಾ ಜಲಸಂಧಿ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದಾಗಿ ನವೆಂಬರ್ 29 (ನಾಳೆ) ವೇಳೆಗೆ ಮಾರುತವು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದ್ದು, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಲಿದೆ. ಬಳಿಕ ಇದು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದೆ. ಹಾಗೆಯೇ ನಂತರದ 48 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ನೀಡಿದೆ.
ಇದನ್ನೂ ಓದಿ:ಲಾಹೋರ್ ಜಗತ್ತಿನಲ್ಲೇ ಅತಿ ಹೆಚ್ಚು ಮಲಿನ ನಗರ; ಇನ್ನೂ ಸುಧಾರಿಸದ ದೆಹಲಿ ವಾಯು ಗುಣಮಟ್ಟ