ಚಾಂದೌಲಿ (ಉತ್ತರ ಪ್ರದೇಶ):ರಾಜ್ಯದ ಸೈದರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಪೊಲೀಸರ ಅಟ್ಟಹಾಸ ಬಯಲಾಗಿದೆ. ದಾಳಿಗೆ ಹೋದ ಪೊಲೀಸರ ಲಾಠಿ ಪ್ರಹಾರಕ್ಕೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ಮತ್ತೊಬ್ಬ ಬಾಲಕಿ ಗಾಯಗೊಂಡಿದ್ದಾಳೆ. ಪೊಲೀಸರು ಶವ ಬಿಟ್ಟು ಪರಾರಿಯಾಗಿದ್ದಾರೆ. ಬಾಲಕಿ ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೈದರಾಜ-ಜಮಾನಿಯಾ ರಸ್ತೆ ತಡೆ ನಡೆಸಿ ಅನೇಕ ವಾಹನಗಳನ್ನು ಜಖಂಗೊಳಿಸಿದರು. ಈ ವೇಳೆ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ ಎನ್ನಲಾಗ್ತಿದೆ.
ಘಟನೆಯ ವಿವರ:ಭಾನುವಾರ ಸಂಜೆ ಸೈದರಾಜ ಪೊಲೀಸರು ಪಾತಕಿ ಕನ್ಹಯ್ಯ ಯಾದವ್ ಎಂಬುವವನ್ನು ಬಂಧಿಸಲು ಗ್ರಾಮಕ್ಕೆ ಬಂದಿದ್ದರು. ಆದರೆ ಆತ ಆದರೆ ಮನೆಯಲ್ಲಿ ಪತ್ತೆಯಾಗಿರಲಿಲ್ಲ. ಆರೋಪಿ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳಿದ್ದರು. ಪೊಲೀಸರು ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಅವರ ನಡುವೆ ವಾಗ್ವಾದ ನಡೆದಿದೆ. ಇದಾದ ಬಳಿಕ ಪೊಲೀಸರು ಬಾಲಕಿಯರನ್ನು ಥಳಿಸಿದ್ದಾರೆ. ಇದರಲ್ಲಿ ಓರ್ವ ಬಾಲಕಿ ಸಾವನ್ನಪ್ಪಿ, ಇನ್ನೊಬ್ಬಳು ಗಾಯಗೊಂಡಿದ್ದಾಳೆ. ಬಳಿಕ ಪೊಲೀಸರು ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗ್ತಿದೆ.