ಕರ್ನಾಟಕ

karnataka

ETV Bharat / bharat

ಹೋಟೆಲ್‌ಗಳ ಜೊತೆ ಸೇರಿ ಆಸ್ಪತ್ರೆಗಳು ವ್ಯಾಕ್ಸಿನ್‌ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ - institutions giving Covid vaccination package with hotels

ಸ್ಟಾರ್ ಹೋಟೆಲ್‌ಗಳಲ್ಲಿ ನಡೆಸುವ ವ್ಯಾಕ್ಸಿನೇಷನ್ ಪ್ರಕ್ರಿಯೆ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕೋವಿಡ್ ವ್ಯಾಕ್ಸಿನೇಷನ್ ಪ್ಯಾಕೇಜ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ, Action against institutions giving Covid vaccination package
ಕೋವಿಡ್ ವ್ಯಾಕ್ಸಿನೇಷನ್ ಪ್ಯಾಕೇಜ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ

By

Published : May 30, 2021, 8:11 AM IST

Updated : May 30, 2021, 9:37 AM IST

ನವದೆಹಲಿ:ನಿಗದಿತ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹೋಟೆಲ್‌ಗಳ ಸಹಯೋಗದೊಂದಿಗೆ ಕೋವಿಡ್ ವ್ಯಾಕ್ಸಿನೇಷನ್‌ಗೆ ಪ್ಯಾಕೇಜ್ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಅಥವಾ ಆಡಳಿತಾತ್ಮಕ ಕ್ರಮಗಳನ್ನು ಪ್ರಾರಂಭಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ. ಮನೋಹರ್ ಅಗ್ನಾನಿ, ಕೆಲವು ಖಾಸಗಿ ಆಸ್ಪತ್ರೆಗಳು ಕೆಲವು ಹೋಟೆಲ್‌ಗಳ ಸಹಯೋಗದೊಂದಿಗೆ ಕೋವಿಡ್ ಲಸಿಕೆಗಾಗಿ ಪ್ಯಾಕೇಜ್ ನೀಡುತ್ತಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಗಮನಕ್ಕೆ ಬಂದಿದೆ. ಇದು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕಾಗಿ ಹೊರಡಿಸಿದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಸ್ಟಾರ್ ಹೋಟೆಲ್‌ಗಳಲ್ಲಿ ನಡೆಸುವ ವ್ಯಾಕ್ಸಿನೇಷನ್ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅಗ್ನಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂತಹ ಸಂಸ್ಥೆಗಳ ವಿರುದ್ಧ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆದ್ದರಿಂದ, ನಿಗದಿತ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಮೇಲ್ವಿಚಾರಣೆ ಮಾಡಲು ಮತ್ತು ಖಚಿತಪಡಿಸಿಕೊಳ್ಳಲು ಸಹ ನಿಮ್ಮನ್ನು ಕೋರಲಾಗಿದೆ ಎಂದು ಹೇಳಿದ್ದಾರೆ.

Last Updated : May 30, 2021, 9:37 AM IST

ABOUT THE AUTHOR

...view details