ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,518 ಹೊಸ ಕೊರೊನಾವೈರಸ್ ಸೋಂಕುಗಳು ಪತ್ತಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,31,81,335ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 25,782 ಸಕ್ರಿಯ ಪ್ರಕರಣಗಳಿವೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ 25 ಸಾವಿರದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ! - ಭಾರತದ ಕೋವಿಡ್ ವರದಿ
ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..
ದೇಶದಲ್ಲಿ 25 ಸಾವಿರದ ಗಡಿ ದಾಟಿದ ಕೋವಿಡ್ ಸಕ್ರಿಯ ಪ್ರಕರಣ
ದೇಶಾದ್ಯಂತ ಕಳೆದೊಂದು ದಿನದಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,701 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 1.62 ರಷ್ಟಿದ್ದು, ಚೇತರಿಕೆಯ ಪ್ರಮಾಣ ಶೇ. 98.73 ಇದೆ ಎಂದು ಸಚಿವಾಲಯ ತಿಳಿಸಿದೆ.
ಓದಿ:ಕರಣ್ ಜೋಹರ್ ಪಾರ್ಟಿ ಎಫೆಕ್ಟ್.. ಶಾರುಖ್, ಕತ್ರಿನಾಗೂ ವಕ್ಕರಿಸಿದ ಕೋವಿಡ್
ನಿನ್ನೆ 2,779 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,30,852 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 194.12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.