ಅಹಮದಾಬಾದ್: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ತೀಸ್ತಾ ಸೆಟಲ್ವಾಡ್ ಅವರು ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಸುಪ್ರೀಂಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಕೋರ್ಟ್ ಬೇಲ್ ನೀಡಿದ ಒಂದು ದಿನದ ಬಳಿಕ ಸೆಟಲ್ವಾಡ್ ಜೈಲು ವಾಸದಿಂದ ಮುಕ್ತಿ ಹೊಂದಿದ್ದಾರೆ.
ಜೂನ್ 26 ರಂದು ತೀಸ್ತಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರು ಸಬರಮತಿ ಕೇಂದ್ರ ಕಾರಾಗೃಹದಲ್ಲಿದ್ದರು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸೆಷನ್ಸ್ ನ್ಯಾಯಾಧೀಶ ವಿ ಎ ರಾಣಾ ಅವರ ಮುಂದೆ ಹಾಜರುಪಡಿಸಲಾಯಿತು.