ನವದೆಹಲಿ:ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದಲ್ಲಿ ಕಾಶ್ಮೀರ ಪಂಡಿತರ ಪಾತ್ರದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿರುವ ಹಿರಿಯ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರುದ್ರಾಕ್ಷಿ ಮಾಲೆ ನೀಡಿದರು.
ಈ ಕುರಿತ ಫೋಟೋಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅನುಪಮ್ ಖೇರ್, ಗೌರವಾನ್ವಿತ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಸಂತೋಷವಾಯಿತು. ದೇಶಕ್ಕಾಗಿ ನೀವು ಹಗಲಿರುಳು ಶ್ರಮಿಸುತ್ತಿರುವುದು ಎಲ್ಲರಿಗೂ ಸ್ಪೂರ್ತಿದಾಯಕ. ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಸ್ವೀಕರಿಸಿದ್ದನ್ನು ನಾನು ಎಂದಿಗೂ ನೆನಪಿಟ್ಟುಕೊಳ್ಳುವೆ ಎಂದು ಬರೆದುಕೊಂಡಿದ್ದಾರೆ.