ನಟ ದೂದ್ ಪೇಡಾ ದಿಗಂತ್ಗೆ ಗಂಭೀರಗಾಯವಾಗಿದೆ. ಗೋವಾದ ಸಮುದ್ರ ದಡದಲ್ಲಿ ಸಮ್ಮರ್ ಸಾಲ್ಟ್ ಜಂಪ್ ಮಾಡುವ ವೇಳೆ ಆಯತಪ್ಪಿ ಬಿದ್ದು ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ಗೋವಾಗೆ ಪ್ರವಾಸ ಹೋಗಿದ್ದಾಗ ಈ ಘಟನೆ ನಡೆದಿದೆ.
ನಟ ದೂದ್ ಪೇಡಾ ದಿಗಂತ್ ಕುತ್ತಿಗೆಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಬೆಂಗಳೂರಿನ ಮಣಿಪಾಲದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ತಿಳಿದುಬಂದಿದೆ. ಅವರನ್ನು ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದಕ್ಕೂ ಮುನ್ನ ಗೋವಾದಲ್ಲೇ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.
ಆಸ್ಪತ್ರೆಗೆ ನಟನನ್ನು ದಾಖಲು ಮಾಡುತ್ತಿದ್ದಂತೆ ಆಪ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಯನ್ನು ಧಾವಿಸುತ್ತಿದ್ದಾರೆ. ಈ ಸಂಬಂಧ ದಿಗಂತ ಪತ್ನಿ ಐಂದ್ರಿತಾ ಅವರ ತಂದೆ ಮಾಹಿತಿ ನೀಡಿದ್ದು, ದಿಗಂತ್ಗೆ ಎಂಆರ್ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿಸಲಾಗಿದೆ. ಇದರಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟುಬಿದ್ದಿದೆ ಎಂಬ ಬಗ್ಗೆ ತಿಳಿದುಬಂದಿದೆ ಎಂದಿದ್ದಾರೆ.