ನವದೆಹಲಿ: 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ಅವರ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿಯಾದ ನೋರಾ ಫತೇಹಿ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ನೋರಾ ಫತೇಹಿ ಇಂದು ಜಾರಿ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದರು.
ಫೋರ್ಟಿಸ್ ಹೆಲ್ತ್‌ಕೇರ್ ಪ್ರಮೋಟರ್ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರನ್ನು ವಂಚಿಸಿ, ಬಹುಕೋಟಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದೆಹಲಿ ಪೊಲೀಸರಿಂದ ಬಂಧಿಲ್ಪಟ್ಟಿದ್ದ ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದಲ್ಲಿ ನೋರಾ ಫತೇಹಿಗೆ ಸಮನ್ಸ್ ನೀಡಲಾಗಿತ್ತು.
ಇದರ ಜೊತೆಗೆ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿದ್ದಾರೆ. ನಾಳೆ ಅವರು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.