ಚೆನ್ನೈ:ನಟ, ಸೂಪರ್ ಸ್ಟಾರ್ ರಜನಿಕಾಂತ್ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ. ನಿನ್ನೆ (ಮೇ 12) ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶಿವ ನಿರ್ದೇಶನದ ಅಣ್ಣಾಥೆ ಚಿತ್ರದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದು, ಇಂದು ವ್ಯಾಕ್ಸಿನ್ ಪಡೆದಿದ್ದಾರೆ.
ಕೋವಿಡ್ ಲಸಿಕೆ ಎರಡನೇ ಡೋಸ್ ಪಡೆದ ಸೂಪರ್ ಸ್ಟಾರ್ ರಜನಿಕಾಂತ್! - soundarya rajnikanth
ನಟ ರಜನಿಕಾಂತ್ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿದ್ದು, ಈ ಬಗ್ಗೆ ಅವರ ಪುತ್ರಿ ಸೌಂದರ್ಯ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಜಿನಿಕಾಂತ್
ಈ ಕುರಿತು ರಜನಿಕಾಂತ್ ಪುತ್ರಿ ಸೌಂದರ್ಯ ರಜಿನಿಕಾಂತ್ ಟ್ವಿಟರ್ನಲ್ಲಿ ತಲೈವಾ ವ್ಯಾಕ್ಸಿನ್ ಪಡೆಯುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. 'ನಮ್ಮ ತಲೈವಾ ವ್ಯಾಕ್ಸಿನ್ ಪಡೆದಿದ್ದಾರೆ. ಕೋವಿಡ್ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಿ ಗೆಲ್ಲೋಣ. ಎಲ್ಲರೂ ಮನೆಯಲ್ಲಿಯೇ ಇರಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಬರೆದಿದ್ದಾರೆ.
ಇದನ್ನೂ ಓದಿ:ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು: ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಲು ಮುಂದಾದ ಪಿಎಂ