ಮುಂಬೈ: ಬಾಲಿವುಡ್ ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರು ಆಫ್ಲೈನ್ ಮೂಲಕ ಮಕ್ಕಳಿಗೆ ಪರೀಕ್ಷೆ ನಡೆಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
'ಕ್ಯಾನ್ಸಲ್ ಬೋರ್ಡ್ ಪರೀಕ್ಷೆ' ಎಂಬ ಅಭಿಯಾನದ ಸೇರಿಕೊಂಡಿರುವ ಸೂದ್, ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. "ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟ. ವಿದ್ಯಾರ್ಥಿಗಳ ಪರವಾಗಿ ನಾನು ವಿನಂತಿಯನ್ನು ಮಾಡಲು ಬಯಸುತ್ತೇನೆ. ಸಿಬಿಎಸ್ಇ ಮತ್ತು ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಿದ್ಧರಿದ್ದಾರೆ ಎಂದು ನಾನು ಭಾವಿಸುವುದಿಲ್ಲ" ಎಂದಿದ್ದಾರೆ.