ಚೆನ್ನೈ: ಜನಪ್ರಿಯ ತಮಿಳು ನಟ ಚಿಯಾನ್ ವಿಕ್ರಮ್ ಅವರಿಗೆ ಕೊರೊನಾ ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಅವರು ಪ್ರಸ್ತುತ ತಮ್ಮ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ನಟ ವಿಕ್ರಮ್ ಒಂದು ವಾರದಿಂದ ಸೌಮ್ಯ ಜ್ವರದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಅವರು ಆಳ್ವಾರಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಬಂದಿದೆ.