ನವದೆಹಲಿ:ಕೋವಿಶೀಲ್ಡ್ ಲಸಿಕೆ ಪಡೆದುಕೊಂಡು ಯುರೋಪಿಯನ್ ಒಕ್ಕೂಟ ಸೇರಿದಂತೆ ಇತರೆ ರಾಷ್ಟ್ರಗಳಿಗೆ ತೆರಳುತ್ತಿರುವವರಿಗೆ ಸಮಸ್ಯೆಯಾಗುತ್ತಿದ್ದು, ಆದಷ್ಟು ಬೇಗ ಎಲ್ಲವನ್ನೂ ಬಗೆಹರಿಸಲಾಗುವುದು ಎಂದು ಸೇರಂ ಇನ್ಸ್ಟ್ಯೂಟ್ ಆಫ್ ಇಂಡಿಯಾದ ಮುಖ್ಯಸ್ಥ ಪೂನವಾಲ್ಲಾ ತಿಳಿಸಿದ್ದಾರೆ.
ಕೋವಿಡ್ ಲಸಿಕೆ ಪಡೆದುಕೊಂಡು ವಿದೇಶಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪರಿಹಾರ ಹುಡುಕುತ್ತೇವೆ ಎಂದು ತಿಳಿಸಿದ್ದಾರೆ. ಜತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪೂನಾವಾಲ್ಲಾ, ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡು ವಿದೇಶಕ್ಕೆ ತೆರಳಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ಅನುಮತಿ ನಿರಾಕರಿಸಿದ್ದರಿಂದ ಅವರಿಗೆ ತೊಂದರೆಯಾಗುತ್ತಿದೆ. ಅವರು ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಪಾರ್ಸ್ಪೋರ್ಟ್ನಲ್ಲಿ ಪರಿಗಣಿಸುವ ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿರಿ: Covid-19 ತಂದಿಟ್ಟ ಬಿಕ್ಕಟ್ಟು: 8 ಅಂಶಗಳ ವಿಶೇಷ ಪ್ಯಾಕೇಜ್ ಘೋಷಿಸಿದ Sitaraman
ಫೈಜರ್/ ಬಯೋಟೆಕ್, ಮಾಡರ್ನಾ, ಅಸ್ಟ್ರಾಜೆನೆಕಾ, ಜಾನ್ಸನ್ ಮತ್ತು ಜಾನ್ಸನ್ ಲಸಿಕೆಗಳಿಗೆ ಮಾತ್ರ ಯುರೋಪಿಯನ್ ಒಕ್ಕೂಟ ಅನುಮೋದನೆ ನೀಡಿದೆ. ಜತೆಗೆ ಈ ಲಸಿಕೆ ತೆಗೆದುಕೊಂಡವರಿಗೆ ಮಾತ್ರ ಪಾಸ್ಪೋರ್ಟ್ ನೀಡಲಾಗುತ್ತಿದೆ. ಸೇರಂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಇಲಾಖೆಗೆ ಪತ್ರ ಸಹ ಬರೆದಿದ್ದು, ತಕ್ಷಣವೇ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.