ಕೊಲ್ಲಂ (ಕೇರಳ):ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಕೇಸ್ನಲ್ಲಿ ಗಂಡನೇ ಹಂತಕನೆಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾಳ ಪತಿಯನ್ನು ವರದಕ್ಷಿಣೆ ಸಾವು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇರಳದ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ ಎನ್ ಅವರು ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿ ವರದಕ್ಷಿಣೆ ಸಂಬಂಧಿತ ಕಿರುಕುಳದ ಅಪರಾಧದ ಮೇಲೆ ವಿಸ್ಮಯಾಳ ಪತಿಯನ್ನು ಆರೋಪಿ ಎಂದು ಘೋಷಿಸಿದ್ದು, ನಾಳೆ(ಮಂಗಳವಾರ) ಶಿಕ್ಷೆ ಪ್ರಕಟಿಸುವ ನಿರೀಕ್ಷೆಯಿದೆ.
ಅಪರಾಧಿ ಎಸ್ ಕಿರಣ್ ಕುಮಾರ್‌ಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ಕೋರಿದೆ. ಇದು ಸಾಮಾಜಿಕ ಅನಿಷ್ಟದ ವಿರುದ್ಧದ ತೀರ್ಪು ಮತ್ತು ಒಬ್ಬ ವ್ಯಕ್ತಿಯ ವಿರುದ್ಧವಲ್ಲ ಎಂದು ಎಸ್‌ಪಿಪಿ ಹೇಳಿದೆ.