ಶ್ರೀನಗರ: ಪ್ರವಾದಿ ಮುಹಮದ್ರ ಕುರಿತಾದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಉತ್ತರಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಬುಲ್ಡೋಜರ್ ಪ್ರಯೋಗ ಮಾಡಿದೆ. ಇದನ್ನು ಆಕ್ಷೇಪಿಸಿರುವ ಜಮ್ಮು ಕಾಶ್ಮೀರದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಉತ್ತರಪ್ರದೇಶದಲ್ಲಿ ಅರಣ್ಯ ಕಾನೂನು ಪಾಲನೆ ಮಾಡಲಾಗುತ್ತಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ಬುಲ್ಡೋಜರ್ ಪ್ರಯೋಗ ಮಾಡುತ್ತಿದ್ದಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅರಣ್ಯ ಕಾನೂನು ನಡೆಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.