ಹೌರಾ(ಪಶ್ಚಿಮ ಬಂಗಾಳ):ಕರ್ನಾಟಕದ ನಂತರ ಈಗ ಪಶ್ಚಿಮ ಬಂಗಾಳದಲ್ಲಿ ಹಿಜಾಬ್ ಧರಿಸಿ ಶಾಲೆ ಬಂದಿದ್ದ ವಿದ್ಯಾರ್ಥಿಗಳ ವಿರೂದ್ದ ಆಕ್ರೋಶ ಭುಗಿಲೆದ್ದಿದೆ. ಧುಲಗೋರಿ ಆದರ್ಶ ವಿದ್ಯಾಲಯದ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳ ಗುಂಪು ಹಿಜಾಬ್ ಧರಿಸಿ ಶಾಲೆಗೆ ಬರುತ್ತಿರುವವರಿಗೆ ವಿರೋಧ ವ್ಯಕ್ತಪಡಿಸಿದೆ. ಇನ್ನು ಈ ಘಟನೆಯಿಂದ ಶಾಲಾ ಆವರಣದಲ್ಲಿ ಅಶಾಂತಿ ಉಂಟಾಗಿದ್ದು, ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ.
ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಕೇಸರಿ ಸ್ಕಾರ್ಫ್ ಧರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಇದರಿಂದ ಶಾಲೆಯ ಅಶಾಂತಿಗೆ ಕಾರಣವಾಯಿತು. ಈ ವಿಚಾರವಾಗಿ ಶಾಲಾ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿತ್ತು. ಪ್ರತಿಭಟನೆಯಿಂದ ಶಾಲಾ ಆಸ್ತಿ ಪಾಸ್ತಿಗೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಕೊಡಲೇ ಶಾಲಾ ಅಧಿಕಾರಿಗಳು ಸಂಕ್ರೈಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು, ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.