ಪಂಚಕುಲ: ಅಸ್ಸೋಂನಲ್ಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಎಲ್ಲ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಪ್ರಚಾರ ಮಾಡುತ್ತಿವೆ. ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್)ನ ಪ್ರತಿಪಕ್ಷದ ನಾಯಕ ಹಗ್ರಾಮ ಮೊಹಿಲಾರಿ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ ಆರೋಪದಲ್ಲಿ ಅಸ್ಸೋಂ ಸಚಿವ ಹಾಗೂ ಬಿಜೆಪಿ ನಾಯಕ ಹಿಮಾಂತ ಬಿಸ್ವಾ ಶರ್ಮಾ ಅವರಿಗೆ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಮತ್ತು ಚುನಾವಣೆ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಬಿಜೆಪಿ ನಾಯಕ ಹಿಮಾಂತ ಬಿಸ್ವಾ ಶರ್ಮಾ ಅವರನ್ನ ಚುನಾವಣೆ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ತಡೆದಿದ್ದು, ಹಾಗೆಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಕುಡಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಬೇಕು, ಆಗ ಮಾತ್ರ ರಾಜ್ಯದಲ್ಲಿ ನ್ಯಾಯಯುತ ಚುನಾವಣೆ ನಡೆಯಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.