ನಂದಿಗ್ರಾಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಎರಡು ಮನೆಗಳನ್ನು ಬಾಡಿಗೆಗೆ ಪಡೆದಿದ್ದಾರೆ.
ನಂದಿಗ್ರಾಮದಲ್ಲಿ ಎರಡು ಮನೆ ಬಾಡಿಗೆ ಪಡೆದ ಮಮತಾ ಬ್ಯಾನರ್ಜಿ - ಸುವೇಂದು ಅಧಿಕಾರಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದ ರಯಾಪರ ಪ್ರದೇಶದಲ್ಲಿ ಎರಡು ಮನೆಗಳನ್ನು ಬಾಡಿಗೆಗೆ ಪಡೆದಿದ್ದು, ಸುವೇಂದು ಅಧಿಕಾರಿಗೆ ತಿರುಗೇಟು ನೀಡಿದ್ದಾರೆ.
ಮಮತಾ ಬ್ಯಾನರ್ಜಿ
ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು, ಕ್ಷೇತ್ರದ ಹಲ್ದಿ ನದಿಯ ದಡದಲ್ಲಿ ಶಾಶ್ವತ ಮನೆ ನಿರ್ಮಿಸುವುದಾಗಿ ಮತ್ತು ಈ ಮನೆಗೆ ಹೆಚ್ಚಾಗಿ ಭೇಟಿ ನೀಡುವುದಾಗಿ ಹೇಳಿದ್ದರು. ಹಾಗಾಗಿ ಇದೀಗ ನಂದಿಗ್ರಾಮದ ರಯಾಪರ ಪ್ರದೇಶದಲ್ಲಿ ಎರಡು ಮನೆಗಳನ್ನು ಬಾಡಿಗೆಗೆ ಪಡೆದಿದ್ದು, ಈ ಎರಡೂ ಮನೆಗಳು ಸುಮಾರು 100 ಮೀಟರ್ ಅಂತರದಲ್ಲಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುವೇಂದು ಅಧಿಕಾರಿ ಅವರು ಮಮತಾ ವಿರುದ್ಧ ನಾಮಪತ್ರ ಸಲ್ಲಿಸಿದ ನಂತರ ದೀದಿ 'ಹೊರಗಿನವರು' ಎಂಬ ಹಣೆಪಟ್ಟಿ ಕಟ್ಟಿದ್ದರು. ಇದೀಗ ಮನೆಗಳನ್ನು ಬಾಡಿಗೆ ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿಗೆ ತಿರುಗೇಟು ನೀಡಿದ್ದಾರೆ.