ಇಸ್ಲಾಮಾಬಾದ್(ಪಾಕಿಸ್ತಾನ): ಅಫ್ಘಾನಿಸ್ತಾನದ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
2019ರಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಇದೇ ಮೊದಲ ಬಾರಿಗೆ ಭಯೋತ್ಪಾಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪಾಕಿಸ್ತಾನದಲ್ಲಿರುವ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಗುಂಪುಗಳ ಭಯೋತ್ಪಾದಕರು ಜಮ್ಮು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂದು ಯೂರೋಪಿಯನ್ ಯೂನಿಯನ್ ಟುಡೇ ಸಂಸ್ಥೆಯು ನಿಕ್ಕಿ ಏಷ್ಯಾದ ವರದಿಯನ್ನು ಉಲ್ಲೇಖಿಸಿ ವರದಿ ಮಾಡಿದೆ.