ಗೋರಖ್‌ಪುರ (ಉತ್ತರ ಪ್ರದೇಶ) :ಉತ್ತರಪ್ರದೇಶ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಸೂಚಿಸಿದೆ. ಆ ಬಳಿಕ ಕಾಂಗ್ರೆಸ್‌ನಲ್ಲಿ ರಾಜೀನಾಮೆಯ ಮಹಾಪರ್ವ ಆರಂಭವಾಗಿದೆ.
ಯೋಗಿ ಆದಿತ್ಯನಾಥ್ ವಿರುದ್ಧ ಹೊಸ ಮುಖ ಚೇತನಾ ಪಾಂಡೆ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲು ಮುಂದಾಗಿದೆ. ಇದು, ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಿರಿಯ ಕೈ ನಾಯಕರು ಸೇರಿದಂತೆ ಅನೇಕರಲ್ಲಿ ಅಸಮಾಧಾನ ಉಂಟಾಗಲು ಕಾರಣವಾಗಿದೆ. ಹಠಾತ್ ಆಗಿ ನಾಯಕರುಗಳು ರಾಜೀನಾಮೆ ನೀಡಲು ಪ್ರಾರಂಭಿಸಿದ್ದಾರೆ.
ಕಾಂಗ್ರೆಸ್ನ ಒಟ್ಟು 28 ಮಂದಿ ಈವರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಎಲ್ಲ ನಾಯಕರುಗಳು ಟಿಕೆಟ್ ಹಂಚಿಕೆಯಿಂದ ಅಸಮಾಧಾನಗೊಂಡಿದ್ದು, ರಾಜ್ಯದ ಕಾಂಗ್ರೆಸ್ ನಾಯಕತ್ವ ನಿರ್ಲಕ್ಷ್ಯವಹಿಸಿದೆ.