ವಿಜಯನಗರಂ(ಆಂಧ್ರಪ್ರದೇಶ): ಕೇಂದ್ರ ಸರ್ಕಾರ ಘೋಷಿಸಿರುವ ಅಲ್ಪಾವಧಿಯ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರುದ್ಧ ಭುಗಿಲೆದ್ದಿರುವ ಆಕ್ರೋಶ, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನೆ ಹಿನ್ನೆಲೆ ಹಲವೆಡೆ ರೈಲು ಸೇವೆ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗಿದೆ. ಅಸ್ವಸ್ಥಗೊಂಡಿದ್ದರೈಲು ಪ್ರಯಾಣಿಕರೋರ್ವರು ಪ್ರಾಥಮಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ವಿಜಯನಗರಂನಲ್ಲಿ ಸಂಭವಿಸಿದೆ.
ಅಗ್ನಿಪಥ್ ವಿರುದ್ಧದ ಪ್ರತಿಭಟನೆ ಹಿನ್ನೆಲೆ, ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೊತ್ತವಲಸ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಕೊರ್ಬಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್ ರೈಲನ್ನು ತಡೆದಿದ್ದಾರೆ. ರೈಲು ಸೇವೆ ಸ್ಥಗಿತಗೊಂಡ ಹಿನ್ನೆಲೆ, ಪ್ರಯಾಣಿಕರು ವಿಶಾಖಪಟ್ಟಣಂ ತಲುಪಲು ಬಸ್ ಮತ್ತು ಆಟೋಗಳನ್ನು ಅವಲಂಬಿಸುವಂತಾಯಿತು.