ಕರ್ನಾಟಕ

karnataka

ETV Bharat / bharat

Air Force Recruitment: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ.. ಅಗ್ನಿವೀರ್​ ವಾಯು ಹುದ್ದೆಗೆ ಅರ್ಜಿ ಹಾಕಿ - ಈಟಿವಿ ಭಾರತ್​ ಕನ್ನಡ

ಅಗ್ನಿಪಥ್​ ಮೂಲಕ ಭೂ, ವಾಯು ಮತ್ತು ನೌಕ ಸೇನೆಯಲ್ಲಿ ಕಾಲಕಾಲಕ್ಕೆ ನೇಮಕಾತಿ ನಡೆಸಲಾಗುತ್ತಿದೆ. ಅದರ ಅನುಸಾರವಾಗಿ ಇದೀಗ ವಾಯು ಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Agniveervayu Recruitment latest Notification
Agniveervayu Recruitment latest Notification

By

Published : Jul 13, 2023, 11:56 AM IST

Updated : Jul 14, 2023, 1:24 PM IST

ದೇಶದ ಅನೇಕ ಯುವ ಜನತೆಗೆ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂಬ ಹಂಬಲ ಇದೆ. ಇದೇ ಉದ್ದೇಶದಿಂದ ರಕ್ಷಣಾ ಇಲಾಖೆ ಅಗ್ನಿಪಥ್​ ಎಂಬ ವಿಶೇಷ ಯೋಜನೆ ಮೂಲಕ ಅಂತಹ ಉತ್ಸಾಹಿಗಳಿಗೆ ಅವಕಾಶ ಒದಗಿಸಿದೆ. ಈ ಅಗ್ನಿಪಥ್​ ಮೂಲಕ ಈಗಾಗಲೇ ಸಾವಿರಾರು ಯುವ ಜನತೆ ರಾಷ್ಟ್ರ ರಕ್ಷಣೆಗೆ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಿದ್ದಾರೆ.

ಅಗ್ನಿಪಥ್​ ಮೂಲಕ ಭೂ, ವಾಯು ಮತ್ತು ನೌಕ ಸೇನೆಯಲ್ಲಿ ಕಾಲಕಾಲಕ್ಕೆ ನೇಮಕಾತಿ ನಡೆಸಲಾಗುತ್ತಿದೆ. ಅದರ ಅನುಸಾರವಾಗಿ ಇದೀಗ ವಾಯು ಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಡೀ ದೇಶಾದ್ಯಂತ ನಡೆಸಲಾಗುವ ನೇಮಕಾತಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ:ಅವಿವಾಹಿತ ಯುವಕ ಮತ್ತು ಯುವತಿಯರು ಈ ಅಗ್ನಿ ವೀರ್​​ ಹುದ್ದೆ ನೇಮಕಾತಿ ನಡೆಸಲಾಗುವುದು. ಒಟ್ಟು ಎಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿಲ್ಲ.

ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್​​) ಅಥವಾ ಮೂರು ವರ್ಷಗಳ ಡಿಪ್ಲೋಮೊ ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 21 ಆಗಿರಬೇಕು. ಅಂದರೆ ಅಭ್ಯರ್ಥಿಗಳು 27 ಜೂನ್​ 2003ರಿಂದ 27 ಡಿಸೆಂಬರ್​ 2006ರೊಳಗೆ ಜನಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.

ವೇತನ: ಈ ಹುದ್ದೆಗಳಿಗೆ ಮೊದಲ ವರ್ಷದಲ್ಲಿ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನ ನಿಗದಿಪಡಿಸಲಾಗಿದೆ.

ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡಬೇಕಿದೆ. ಅಭ್ಯರ್ಥಿಗಳು https://agnipathvayu.cdac.in/AV/ ಈ ಜಾಲತಾಣದ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ. ಅಭ್ಯರ್ಥಿಗಳು 250 ರೂ. ಆನ್​ಲೈನ್​ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅನ್​ಲೈನ್​ ಪರೀಕ್ಷೆ, ದೈಹಿಕ ಪರೀಕ್ಷೆ, ಹೊಂದಿಕೊಳ್ಳುವಿಕೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಗಳು ಜುಲೈ 27 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 17 ಆಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ ಹೇಗಿರಬೇಕು, ಎಷ್ಟು ಎತ್ತರ, ತೂಕ ಇರಬೇಕು ಸೇರಿದಂತೆ ಇನ್ನಿತರ ಮಾಹಿತಿಗಳು ಮತ್ತು ವಿವರಗಳನ್ನು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸರಿಯಾಗಿ ಪರಿಶೀಲಿಸಿ, ಅರ್ಜಿ ಸಲ್ಲಿಸಲು ಮುಂದಾಗತಕ್ಕದ್ದು. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಹಾಗೂ ಅಧಿಕೃತ ಅಧಿಸೂಚನೆಗೆ indianairforce.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ವೇತನ 56,000! ಈ ಅರ್ಹತೆಗಳಿದ್ದರೆ ಅರ್ಜಿ ಹಾಕಿ

Last Updated : Jul 14, 2023, 1:24 PM IST

ABOUT THE AUTHOR

...view details