ಕರ್ನಾಟಕ

karnataka

ETV Bharat / bharat

ಪತಿಯೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ..ಮೂವರ ವಿರುದ್ಧ ಎಫ್​ಐಆರ್​ - ಆಗ್ರಾದಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ

ಪತಿ ಬೆದರಿಸಿ ಗಂಡನೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಎಟ್ಮಾಡ್ಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Agra woman gang-raped in front of husband, accused record criminal act
ಪತಿಯೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ

By

Published : Mar 31, 2021, 9:40 AM IST

ಆಗ್ರಾ(ಉತ್ತರಪ್ರದೇಶ): ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಲೂಟಿ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಮೂರು ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾರ್ಚ್ 29 ರಂದು 19 ವರ್ಷದ ಯುವತಿ ತನ್ನ ಪತಿಯೊಂದಿಗೆ ಮೋಟಾರ್​ ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಎಟ್ಮಾಡ್ಪುರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಲಿಪಶು ತನ್ನ ತಾಯಿಯ ಮನೆಯ ಕಡೆಗೆ ಹೋಗುತ್ತಿದ್ದಾಗ ಬೈಕ್​ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರನ್ನು ತಡೆದು, ಗಂಡನಿಗೆ ಬೆದರಿಕೆ ಹಾಕಿ ಒಬ್ಬೊಬ್ಬರೇ ಅತ್ಯಾಚಾರ ಮಾಡಿದ್ದಾರೆ.

ಗಂಡನೆದುರೇ ಮೂವರು ದುಷ್ಕರ್ಮಿಗಳು ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅವರ ಬಳಿಯಿದ್ದ ಆಭರಣಗಳನ್ನು ಸಹ ಲೂಟಿ ಮಾಡಿದ್ದಾರೆ ಎಂದು ಸಂತ್ರಸ್ತೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಕೃತ್ಯವನ್ನು ಚಿತ್ರೀಕರಿಸಿಕೊಂಡ ಯುವಕರು ದಂಪತಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ: 8 ಯುವಕರ ಬಂಧನ

ಆರೋಪಿಗಳಾದ ಗೌರಿ ರಜಪೂತ್, ಮೋನು ಮತ್ತು ಒಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಡಿ ಮತ್ತು ಸೆಕ್ಷನ್ 394 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details