ಅಮೇಥಿ, ಉತ್ತರ ಪ್ರದೇಶ :ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಮತ್ತು ಉತ್ತರಪ್ರದೇಶದ 20 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಕಾಂಗ್ರೆಸ್ ನಾಯಕಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.
ಚುನಾವಣಾ ಹಿನ್ನೆಲೆ ಅಮೇಥಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ರೈತರು ಮತ್ತು ಸಣ್ಣ ಉದ್ಯಮಿಗಳ ಸಾಲವನ್ನು ಮನ್ನಾ ಮಾಡುತ್ತದೆ. ವಿದ್ಯುತ್ ಬಿಲ್‌ಗಳನ್ನು ಅರ್ಧದಷ್ಟು ಮನ್ನಾ ಮಾಡುತ್ತದೆ.
20 ಲಕ್ಷ ಯುವಕರಿಗೆ ಉದ್ಯೋಗ ನೀಡುತ್ತದೆ ಮತ್ತು ಕೋವಿಡ್ನಿಂದ ಬಳಲುತ್ತಿರುವ ಎಲ್ಲಾ ಕುಟುಂಬಗಳಿಗೆ 25 ಸಾವಿರ ಸಹಕಾರ ನೀಡಲಾಗುತ್ತದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಅನಾರೋಗ್ಯಕ್ಕೀಡಾದವರಿಗೆ 10 ಸಾವಿರ ರೂಪಾಯಿಗಳ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡುತ್ತೇವೆ. ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣಗೊಳಿಸಲು, ಚುನಾವಣೆಯಲ್ಲಿ ಸ್ಪರ್ಧಿಸಲು ಶೇ.40ರಷ್ಟು ಟಿಕೆಟ್ಗಳನ್ನು ಮಹಿಳೆಯರಿಗೆ ನೀಡಲಾಗುತ್ತದೆ. ವಿದ್ಯಾರ್ಥಿನಿಯರ ಸಬಲೀಕರಣಕ್ಕಾಗಿ ಮತ್ತು ಭದ್ರತೆಗಾಗಿ ಅವರಿಗೆ ಸ್ಮಾರ್ಟ್ಫೋನ್, ಸ್ಕೂಟಿಗಳನ್ನು ನೀಡಲಾಗುತ್ತದೆ ಎಂದಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಮತ್ತು ಉತ್ತರಪ್ರದೇಶ ರಾಜ್ಯದಲ್ಲಿ ಸರ್ಕಾರ ಬಂದಾಗಿನಿಂದಲೂ ಸುಳ್ಳಿನ ಜಾಲ ಹರಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಶೀಘ್ರದಲ್ಲೇ ಉತ್ತರಪ್ರದೇಶ 'ಆಧುನಿಕ ರಾಜ್ಯ'ವಾಗಲಿದೆ.. ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆ ಬಳಿಕ ಪ್ರಧಾನಿ ಮಾತು