ಅಹಮದಾಬಾದ್: ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಯೋಜಿತ ರೀತಿಯಲ್ಲಿ ಗುಜರಾತ್‌ಗೆ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದರ ಹಿಂದೆ ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಕೈವಾಡವಿದೆ ಜೊತೆಗೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದೆ.
2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜಾಮೀನು ನೀಡದಂತೆ ಗುಜರಾತ್ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ಉರುಳಿಸುವ ದೊಡ್ಡ ಪಿತೂರಿಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
2002ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ದಿವಂಗತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸೆಟಲ್ವಾಡ್ ಪಿತೂರಿ ನಡೆಸಿದ್ದರು ಎಂದು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ.
ಇದನ್ನೂ ಓದಿ:Gujarat riots case: 'ನಾನು ಅಪರಾಧಿ ಅಲ್ಲ' ಎಂದು ಕೂಗಿ ಕೂಗಿ ಹೇಳಿದ ತೀಸ್ತಾ ಸೆಟಲ್ವಾಡ್