ಗುಜರಾತ್: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಹಮದಾಬಾದ್ ಮುನ್ಸಿಪಲ್ ಟ್ರಾನ್ಸ್‌ಪೋರ್ಟ್ ಸರ್ವಿಸ್ (ಎಎಂಟಿಎಸ್) ಸೇವೆಯನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿ, ಆದೇಶ ಹೊರಡಿಸಲಾಗಿದೆ.
ಕೋವಿಡ್ ಎಫೆಕ್ಟ್: ಅಹಮದಾಬಾದ್‌ನಲ್ಲಿ ಬಸ್ ಸಂಚಾರ ಸ್ಥಗಿತ, ಕರ್ಫ್ಯೂ - ಗುಜರಾತ್ನ ಅಹಮದಾಬಾದ್‌ನಲ್ಲಿ ಕೊರೊನಾ ಪ್ರಕರಣಗಳು
ಗುಜರಾತ್ನ ಅಹಮದಾಬಾದ್‌ನಲ್ಲಿ ಕೊರೊನಾ ಪ್ರಕರಣಗಳು ದಿನೆ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಎಎಂಟಿಎಸ್ ಸೇವೆಯನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿ, ಆದೇಶ ಹೊರಡಿಸಲಾಗಿದೆ.

AMTS
ಕೊರೊನಾ ಪ್ರಕರಣಗಳು ಅಧಿಕವಾಗುತ್ತಿರುವ ಹಿನ್ನೆಲೆ ಅಹಮದಾಬಾದ್‌ನ ಎಲ್ಲಾ ಉದ್ಯಾನವನಗಳನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಿ, ಬಂದ್ ಮಾಡಲಾಗಿದೆ. ಜೊತೆಗೆ ಅಹಮದಾಬಾದ್‌ನಲ್ಲಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಹಾಲು ಮತ್ತು ಔಷಧಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
ಇನ್ನು ಹೊರಗಿನಿಂದ ಸೂರತ್ ನಗರಕ್ಕೆ ಯಾರಾದರೂ ಬಂದರೆ ಏಳು ದಿನ ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಿ ಸೂರತ್ ಮಹಾನಗರ ಪಾಲಿಕೆ ಅಧಿಸೂಚನೆ ಹೊರಡಿಸಿದೆ.