ಹೈದರಾಬಾದ್: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
ಒವೈಸಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಎಐಎಂಐಎಂ ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಮತ ಹಾಕಲಿದ್ದಾರೆ. ಸಿನ್ಹಾ ಅವರು ಈ ಹಿಂದೆ ನನ್ನೊಂದಿಗೆ ಕರೆ ಮಾಡಿ ಮಾತನಾಡಿದರು ಎಂದು ಉಲ್ಲೇಖಿಸಿದ್ದಾರೆ.