ಲಖನೌ (ಉತ್ತರ ಪ್ರದೇಶ): ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಸಿದ್ಧಪಡಿಸಲಾದ ಕರಡು ಬಗ್ಗೆ ಚರ್ಚಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಬುಧವಾರ ಆನ್‌ಲೈನ್ ಮೂಲಕ ಸದಸ್ಯರ ಸಭೆ ನಡೆಸಿದೆ. ಮಂಡಳಿಯ ನೂತನ ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಅಧ್ಯಕ್ಷತೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚಿಸಲಾಗಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸುವಂತೆ ಜನರಿಗೆ ಕರೆ ನೀಡಲಾಗಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕರೆದಿದ್ದ ವರ್ಚುವಲ್ ಸಭೆಯು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ ಸುದೀರ್ಘ ಚರ್ಚೆ ನಡೆಸಲಾಯಿತು. ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಸಭೆ ಉದ್ದೇಶಿಸಿ ಮಾತನಾಡಿ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ವಾತಾವರಣವನ್ನು ನಿರ್ಮಿಸಲಾಗುತ್ತಿದೆ ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ಏಕರೂಪ ನಾಗರಿಕ ಸಂಹಿತೆಯ ವಿವಿಧ ಧರ್ಮಗಳು ಮತ್ತು ಸಂಸ್ಕೃತಿಗಳ ದೇಶ ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ನೋಯಿಸುತ್ತಿದೆ ಎಂದರು.
ಮುಂದುವರೆದು, ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಕಾನೂನು ಆಯೋಗವು ಅಭಿಪ್ರಾಯವನ್ನು ಕೇಳಿದೆ. ಈ ನಿಟ್ಟಿನಲ್ಲಿ ನಾವು ದೊಡ್ಡ ರೀತಿಯಲ್ಲಿ ಉತ್ತರಿಸಬೇಕು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಬೇಕೆಂದು ಮಂಡಳಿಯ ಅಧ್ಯಕ್ಷ ಮೌಲಾನಾ ಖಾಲಿದ್ ಸೈಫುಲ್ಲಾ ರಹಮಾನಿ ಹೇಳಿದರು. ಅಲ್ಲದೇ, ಇದರ ಅಭಿಪ್ರಾಯಗಳನ್ನು ದಾಖಲಿಸಲು ಲಿಂಕ್ ಕಳುಹಿಸಲಾಗುತ್ತಿದೆ. ಇದನ್ನು ಕ್ಲಿಕ್ ಮಾಡಿ ನಿಮ್ಮ ಹೆಸರು ಸಮೇತ ದಾಖಲಿಸಿ ನಿಮ್ಮ ಉತ್ತರವನ್ನು ಕಾನೂನು ಆಯೋಗಕ್ಕೆ ಸಲ್ಲಿಸಬಹುದು ಎಂದು ತಿಳಿಸಿದರು.