ನವದೆಹಲಿ :ಏರ್ ಇಂಡಿಯಾ ವಿಮಾನಯಾನ ಕಂಪನಿಯಿಂದ ಕೇಂದ್ರ ಸರ್ಕಾರ ಹೂಡಿಕೆ ಹಿಂಪಡೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯ ವಿಚಾರಣೆ ನಡೆಸಲಾಗಿದೆ.
ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠವು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದು, ಜನವರಿ 6ಕ್ಕೆ ತೀರ್ಪನ್ನು ಮುಂದೂಡಲಾಗಿದೆ.
ನಾನು ಏರ್ ಇಂಡಿಯಾ ವಿಮಾನಯಾನ ಕಂಪನಿಯಲ್ಲಿ ಹೂಡಿಕೆ ಹಿಂಪಡೆಯುವುದರ ವಿರುದ್ಧ ಇಲ್ಲ. ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಆದರೆ, ಏರ್ ಇಂಡಿಯಾದಲ್ಲಿ ಹೂಡಿಕೆ ಹಿಂಪಡೆಯುವ ಪ್ರಕ್ರಿಯೆ ಟಾಟಾ ಪರವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.