ಮುಂಬೈ: ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಚೇಳು ಕಚ್ಚಿರುವ ಘಟನೆ ಎಪ್ರಿಲ್ನಲ್ಲಿ ನಡೆದಿದ್ದು, ಈ ಬಗ್ಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಶನಿವಾರ ಮಾಹಿತಿ ನೀಡಿದೆ. ಬಳಿಕ ಮಹಿಳಾ ಪ್ರಯಾಣಿಕರನ್ನು ವೈದ್ಯರಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ ವಿಮಾನಯಾನ ಸಂಸ್ಥೆ ತಿಳಿಸಿದೆ.
ಕಳೆದ ಎಪ್ರಿಲ್ 23ರಂದು ನಾಗ್ಪುರದಿಂದ ಮುಂಬೈಗೆ ಏರ್ ಇಂಡಿಯಾ AI 630 ವಿಮಾನದಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ವಿಮಾನದಲ್ಲಿ ಮಹಿಳಾ ಪ್ರಯಾಣಿಕರಿಗೆ ಚೇಳೊಂದು ಕಚ್ಚಿದೆ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಬಳಿಕ ಮಹಿಳಾ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯರು ತಪಾಸಣೆ ನಡೆಸಿದರು.