ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆ ನವೆಂಬರ್ 4 ರಿಂದ ಶೇ.50ರಷ್ಟು ಸರ್ಕಾರಿ ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುವಂತೆ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಪರಿಸರ ಸಚಿವ ಗೋಪಾಲ್ ರೈ ಈ ಆದೇಶವನ್ನು ಹೊರಡಿಸಿದ್ದು, ಇದನ್ನು ಅನುಸರಿಸಲು ಖಾಸಗಿ ಕಂಪನಿಗಳಿಗೆ ಸಲಹೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಹದಗೆಟ್ಟ ಗಾಳಿಯ ಗುಣಮಟ್ಟದಿಂದ ಮಕ್ಕಳನ್ನು ರಕ್ಷಿಸುವ ಸಲುವಾಗಿ ನವೆಂಬರ್ 5 ರಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು. ಹಿರಿಯ ವಿದ್ಯಾರ್ಥಿಗಳ ಹೊರಾಂಗಣ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಶಾಲೆಗಳಿಗೆ ಸೂಚಿಸಲಾಗುವುದು ಎಂದು ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.