ಕರ್ನಾಟಕ

karnataka

ETV Bharat / bharat

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ 496 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರಿಗೆ ಇದೆ ಭಾರಿ ಅವಕಾಶ - ಹುದ್ದೆಗಳ ಭರ್ತಿಗೆ ಅಧಿಸೂಚನೆ

ದೇಶಾದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Airport Authority of India Recruitment 496 junior executive post
Airport Authority of India Recruitment 496 junior executive post

By ETV Bharat Karnataka Team

Published : Oct 16, 2023, 12:24 PM IST

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. 496 ಜ್ಯೂನಿಯರ್​ ಎಕ್ಸಿಕ್ಯೂಟಿವ್​​ (ಏರ್​ ಟ್ರಾಫಿಕ್​ ಕಂಟ್ರೋಲ್​) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ

ಹುದ್ದೆ ವಿವರ: ನಾಗರಿಕ ವಿಮಾನಯಾನ ಅಡಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 496 ಜ್ಯೂನಿಯರ್​ ಎಕ್ಸಿಕ್ಯೂಟಿವ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಭರ್ತಿಗೆ ಮುಂದಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅಭ್ಯರ್ಥಿಗಳು ಎಂಜಿನಿಯರ್​/ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಪಡೆದುಕೊಂಡಿರಬೇಕು. ಭೌತಶಾಸ್ತ್ರ ಅಥವಾ ಗಣಿತವನ್ನು ಬಿಎಸ್ಸಿಯಲ್ಲಿ ಒಂದು ವಿಷಯವಾಗಿ ಓದಿರಬೇಕು. ಈ ಹುದ್ದೆಗೆ ಬಿಇ, ಬಿಟೆಕ್​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ವೇತನ: ಈ ಹುದ್ದೆಗೆ ಅಭ್ಯರ್ಥಿಗಳಿಗೆ 40,000 -1,40,000 ರೂವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿ ಹೊಂದಿರಬೇಕು. ಹಿಂದುಳಿದ ಅಭ್ಯರ್ಥಿಗಳು 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಸರಿಯಾಗಿ ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಮುಂದುವರೆಯಬೇಕಿದೆ. ಈ ಹುದ್ದೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲ ಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ ಸೇರಿದಂತೆ ವಿವಿಧ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ನಡೆಸಲಾಗುವುದು

ಈ ಹುದ್ದೆಗೆ ಅಭ್ಯರ್ಥಿಗಳು ನವೆಂಬರ್​ 1 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 30 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು aai.aeroಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Job Alert: ಅರಣ್ಯ ಇಲಾಖೆಯಿಂದ ವೀಕ್ಷಕರ ಹುದ್ದೆಗೆ ನೇಮಕಾತಿ; ಅಕ್ಟೋಬರ್​ 26 ಅರ್ಜಿ ಸಲ್ಲಿಕೆಗೆ ಕಡೆಯ ದಿನ

ABOUT THE AUTHOR

...view details