ಕರ್ನಾಟಕ

karnataka

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ: ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್

By

Published : Mar 14, 2021, 6:59 AM IST

ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ 20 ಕಾರ್ಯಕರ್ತರು ಹಾಗೂ ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಶನಿವಾರ ಕೆಲವು ಪತ್ರಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ 20 ಕಾರ್ಯಕರ್ತರ ವಿರುದ್ಧ ದೂರು​ ದಾಖಲಿಸಲಾಗಿದೆ.

ಹಲ್ಲೆ ಕುರಿತು ಮಾಹಿತಿ ನೀಡಿದ ಪ್ರೆಸ್​ ಅಸೋಸಿಯೇಷನ್​ ಅಧ್ಯಕ್ಷ

ಪತ್ರಕರ್ತರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 147, 342 ಮತ್ತು 323 ರ ಅಡಿ ಪಕ್ವಾರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ನಾಯಕರು ತಮ್ಮ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಪತ್ರಕರ್ತರು ಆರೋಪಿಸಿದ್ದಾರೆ. ಘಟನೆಯಲ್ಲಿ ಕೆಲ ಪತ್ರಕರ್ತರು, ಕ್ಯಾಮೆರಾಮ್ಯಾನ್ ಕಾಲಿಗೆ ಗಾಯವಾಗಿದ್ದರೆ, ಕೆಲ ಕ್ಯಾಮರಾಗಳು ಜಖಂಗೊಂಡಿವೆ. ಗಾಯಾಳು ಪತ್ರಕರ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಹಿನ್ನೆಲೆ:

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಾರ್ಚ್ 11 ರಂದು ಹೋಟೆಲ್‌ವೊಂದರಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಈ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಮಾಜಿ ಸಿಎಂ ಕೆರಳಿದ್ದು, ಯಾದವ್ ಸೆಕ್ಯುರಿಟಿ ಗಾರ್ಡ್‌ಗಳು, ಕಾರ್ಯಕರ್ತರು ಸೇರಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದರು.

ABOUT THE AUTHOR

...view details