ಜಬಲ್ಪುರ್ (ಮಧ್ಯಪ್ರದೇಶ):ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿ, ಥಳಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್ದಲ್ಲಿ ನಡೆದಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕುಡಿದ ಮತ್ತಿನಲ್ಲಿ ಯುವಕನಿಂದ ಯುವತಿಗೆ ಕಿರುಕುಳ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಗಣೇಶಗಂಜ್ ಪ್ರದೇಶದಲ್ಲಿ ವಾಸವಾಗಿದ್ದ ಕೆಲ ದುಷ್ಕರ್ಮಿಗಳು ಅಕ್ರಮವಾಗಿ ಮದ್ಯ ಮಾರಾಟ ಕೆಲಸದಲ್ಲಿ ಭಾಗಿಯಾಗಿದ್ದು, ಇದರ ಬಗ್ಗೆ ಯುವತಿ ಪ್ರಶ್ನೆ ಮಾಡಿದ್ದಾಳೆ.
ಇದರಿಂದ ಆಕ್ರೋಶಗೊಂಡಿರುವ ಯುವಕನೋರ್ವ ಕಂಠಪೂರ್ತಿ ಕುಡಿದು ಆಕೆಗೆ ಕಿರುಕುಳ ನೀಡಿದ್ದು, ಹಲ್ಲೆ ಕೂಡ ನಡೆಸಿದ್ದಾನೆ. ಈ ವೇಳೆ ಯುವತಿಯ ಕುಟುಂಬದವರು ಆಕೆಯ ರಕ್ಷಣೆಗೆ ಧಾವಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ದೂರು ದಾಖಲು ಮಾಡಲಾಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಆದರೂ ಇಲ್ಲಿಯವರೆಗೆ ಅವರಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ.
ಇದನ್ನೂ ಓದಿ: ಅನುರಾಗ್ ಕಶ್ಯಪ್, ತಾಪ್ಸಿ ಸೇರಿದಂತೆ ಬಾಲಿವುಡ್ ಸೆಲಬ್ರಿಟಿಗಳ ಮನೆ ಮೇಲೆ ಐಟಿ ದಾಳಿ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಲ್ಲಿನ ಮಹಿಳೆಯರಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಆದರೆ ನಮಗೆ ಇಲ್ಲಿಯವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.