ಗೈರ್ಸೈನ್ (ಉತ್ತರಾಖಂಡ): ಇಲ್ಲಿನ ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದು(ಮಂಗಳವಾರ) ಸದನದಲ್ಲಿ ಕೋಲಾಹಲ ಸೃಷ್ಟಿಸಿದ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಸ್ಪೀಕರ್ ರಿತು ಖಂಡೂರಿ ಸದನದಿಂದ ಅಮಾನತುಗೊಳಿಸಿರುವ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದ ಎರಡನೇ ದಿನದ ಕಲಾಪ ಗೈರ್ಸೈನ್ನ ಭರಡಿಸೈನ್ನಲ್ಲಿ ನಡೆಯುತ್ತಿದೆ.
ಎರಡನೇ ದಿನದ ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಶಾಸಕರು ಕಬ್ಬಿನ ಬೆಂಬಲ ಬೆಲೆ ಮತ್ತು ರೈತರಿಗೆ ಪಾವತಿಗೆ ಸಂಬಂಧಿಸಿದಂತೆ ವಿಧಾನಸಭೆಯ ಮುಂದೆ ಪ್ರತಿಭಟನೆ ನಡೆಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ನಿರತ ಕಾಂಗ್ರೆಸ್ ಶಾಸಕರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ನಂತರ ವಿರೋಧ ಪಕ್ಷದ ಪ್ರತಿಭಟನಾನಿರತ ಶಾಸಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿ, ಕಾಗದದ ಚೆಂಡುಗಳನ್ನು ತಯಾರಿಸಿ ಸದನದ ಬಾವಿಗೆ ಎಸೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರ ಅಮಾನತು:ಕಾಂಗ್ರೆಸ್ ಶಾಸಕರ ನಡೆಯಿಂದ ಕುಪಿತಗೊಂಡ ಸ್ಪೀಕರ್, ಕಠಿಣ ನಿರ್ಧಾರ ಕೈಗೊಂಡು ದಿನದ ಸದನದ ಕಲಾಪದಿಂದ ಎಲ್ಲ ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದರು. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರನ್ನು ಸದನದ ಕಲಾಪದಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. ನಂತರ ವಿಧಾನಸಭೆಯ ಕಲಾಪಗಳನ್ನು ಮಧ್ಯಾಹ್ನ 3 ಗಂಟೆಯವರೆಗೆ ಮುಂದೂಡಲಾಯಿತು. ಕಾಂಗ್ರೆಸ್ ಶಾಸಕರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸದನದ ಬಾವಿಯಲ್ಲಿ ಕೋಲಾಹಲ ಸೃಷ್ಟಿಸಿದಾಗ ಜಸ್ಪುರದ ಶಾಸಕ ಆದೇಶ್ ಚೌಹಾಣ್ ಅವರು ಹಕ್ಕುಚ್ಯುತಿ ಮಂಡನೆ ಮಾಡಿದರು.
ನೌಕರರನ್ನು ವಜಾಗೊಳಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದ ಸರ್ಕಾರ:ಪುಷ್ಕರ್ ಧಾಮಿ ನೇತೃತ್ವದ ಬಿಜೆಪಿ ಸರ್ಕಾರವು ಉತ್ತರಾಖಂಡ ಅಸೆಂಬ್ಲಿ ಮತ್ತು ಹರಿದ್ವಾರದಲ್ಲಿ ನಿರ್ಮಿಸಲಾಗುತ್ತಿರುವ ಹರಿದ್ವಾರ ಹರ್ ಕಿ ಪೌರಿ ಕಾರಿಡಾರ್‌ನಿಂದ ನೌಕರರನ್ನು ವಜಾಗೊಳಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿತ್ತು. ಈ ಕುರಿತು ಮಾಜಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಧಾಮಿ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರ ಮತ್ತು ವಿಧಾನಸಭೆಯ ಸ್ಪೀಕರ್ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಅವರು ಟೀಕಿಸಿದ್ದರು.
ಇದನ್ನೂ ಓದಿ:ಪ್ರಧಾನಿ ಮೋದಿ ಭದ್ರತಾ ಲೋಪ: 9 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ದತೆ
ಸದನದ ಕಲಾಪ ಆರಂಭಕ್ಕೂ ಮುನ್ನ ವಿರೋಧ ಪಕ್ಷ ಕಾಂಗ್ರೆಸ್‌ನ ಶಾಸಕರು ಕಬ್ಬು ಸಮೇತ ವಿಧಾನಸೌಧಕ್ಕೆ ಆಗಮಿಸಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಸರ್ಕಾರವನ್ನು ಟಾರ್ಗೆಟ್ ಮಾಡಿದ ಶಾಸಕ ಆದೇಶ್ ಚೌಹಾಣ್: ವಾಸ್ತವವಾಗಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಮುಂಬರುವ ಕ್ರಷಿಂಗ್ ಹಂಗಾಮಿನ ದೃಷ್ಟಿಯಿಂದ ಸರ್ಕಾರ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಿದೆ. ಇದರಡಿ ಕ್ವಿಂಟಲ್‌ಗೆ 355 ರೂ ಆಗಿದೆ. ಆದರೆ, ಕಳೆದ ವರ್ಷವೂ ಕಬ್ಬಿನ ಬೆಂಬಲ ಬೆಲೆಯನ್ನು 355 ರೂ.ಗೆ ಮಾತ್ರ ಇರಿಸಲಾಗಿತ್ತು, ಇದನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಶಾಸಕರು ಕೈಯಲ್ಲಿ ಕಬ್ಬು ಹಿಡಿದು ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದರು. ಇದರೊಂದಿಗೆ ಸದನದೊಳಗೆ ಕಬ್ಬಿನ ಬೆಂಬಲ ಬೆಲೆ ಹೆಚ್ಚಳದ ವಿಷಯವನ್ನೂ ಪ್ರತಿಪಕ್ಷಗಳು ಪ್ರಸ್ತಾಪಿಸಿದವು. ಇದೇ ವೇಳೆ, ಈಟಿವಿ ಭಾರತದ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಆದೇಶ್ ಚೌಹಾಣ್, ಕಬ್ಬು ರೈತರ ಖರ್ಚು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ಆದರೂ ಸರ್ಕಾರ ಬೆಂಬಲ ಬೆಲೆಯನ್ನು ಹೆಚ್ಚಿಸಿಲ್ಲ ಎಂದು ಹೇಳಿದರು.