ಹೈದರಾಬಾದ್ (ತೆಲಂಗಾಣ): ಹೈದರಾಬಾದ್ನಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಮೂವರು ಆರೋಪಿಗಳನ್ನು ತೆಲಂಗಾಣ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಭಾಗಿಯಾದ ಎಲ್ಲ ಐದು ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಂತೆ ಆಗಿದೆ.
ಜುಬಿಲಿ ಹಿಲ್ಸ್ನಲ್ಲಿ ಮೇ 31ರಂದು ಪಬ್ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್ ಮಲಿಕ್ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಇದೀಗ ಉಮರ್ಖಾನ್ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸರ್ಕಾರ ವಿರುದ್ಧ ಮುಗಿಬಿದ್ದ ಪ್ರತಿಪಕ್ಷಗಳು: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಆಗ್ರಹಿಸಿದ್ದಾರೆ.