ಮುಂಬೈ:ಮಹಾಮಾರಿ ಕೊರೊನಾ ವೈರಸ್ ಹಾವಳಿ ದೇಶದಲ್ಲಿ ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಕೈಗೆ ಸಿಗದ ರೀತಿಯಲ್ಲಿ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಈಗಾಗಲೇ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಇದರ ನಡುವೆಯೂ ಪರಿಸ್ಥಿತಿ ಕೈಮೀರಿ ಹೋಗಿದೆ.
ಇದೀಗ ಮಹಾರಾಷ್ಟ್ರದಲ್ಲಿ ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳಲಾಗಿದ್ದು, ಕೊರೊನಾ ವಿರುದ್ಧ ಹೋರಾಡಲು ದಿನಸಿ ಅಂಗಡಿ, ತರಕಾರಿ ಹಾಗೂ ಡೈರಿಗಳು ಕೇವಲ ನಾಲ್ಕು ಗಂಟೆಗಳ ಕಾಲ ಮಾತ್ರ ಕಾರ್ಯ ನಿರ್ವಹಿಸಲಿದ್ದು, 8 ಗಂಟೆ ಮೇಲೆ ಹೋಂ ಡೆಲಿವರಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.
ಮಹಾರಾಷ್ಟ್ರದಲ್ಲಿ ದಿನಸಿ ಅಂಗಡಿ, ತರಕಾರಿ, ಡೈರಿ, ಬೇಕರಿ, ಹಣ್ಣಿನ ಅಂಗಡಿ ಬೆಳಗ್ಗೆ 7ರಿಂದ 11ಗಂಟೆವರೆಗೆ ಮಾತ್ರ ಕೆಲಸ ಮಾಡಲಿದ್ದು, ಇಂದಿನಿಂದಲೇ ಈ ನಿಯಮ ಜಾರಿಗೊಳ್ಳಲಿದೆ. ಬೆಳ್ಳಗ್ಗೆ 7 ಗಂಟೆಯಿಂದ ರಾತ್ರಿ 8ರವರೆಗೆ ಮಾತ್ರ ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಕೇಜ್ರಿವಾಲ್ ಪತ್ನಿ ಸುನಿತಾಗೆ ಕೊರೊನಾ.. ಹೋಂ ಕ್ವಾರಂಟೈನ್ಗೊಳಗಾದ ಸಿಎಂ!
ಮಹಾರಾಷ್ಟ್ರದಲ್ಲಿ ಈಗಾಗಲೇ ಸಿನಿಮಾ ಥಿಯೇಟರ್, ಜಿಮ್, ಕ್ರೀಡಾ ಸಂಕೀರ್ಣ, ಸಿನಿಮಾ, ಧಾರಾವಾಹಿ ಚಿತ್ರೀಕರಣ, ಹೋಟೆಲ್, ರೆಸ್ಟೋರೆಂಟ್ ಬಂದ್ ಇರಲಿದ್ದು, ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ. ಅನಗತ್ಯವಾಗಿ ಮನೆಯಿಂದ ಹೊರ ಬರುವಂತಿಲ್ಲ. ಅಗತ್ಯ ಸೇವೆ ಬಿಟ್ಟು ಇತರ ಎಲ್ಲ ಸೇವೆ ಬಂದ್ ಆಗಿವೆ.