ನವದೆಹಲಿ:ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಕರೆದಿದ್ದಕ್ಕಾಗಿ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಷನ್‌ನ ಮುಖ್ಯಸ್ಥ ಇಮಾಮ್ ಡಾ. ಉಮರ್ ಅಹ್ಮದ್ ಇಲ್ಯಾಸಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಸೆಪ್ಟೆಂಬರ್ 23 ರಂದು ಇಂಗ್ಲೆಂಡಿನಿಂದ ಫೋನ್ ಕರೆ ಬಂದಿದೆ. ಕರೆಯಲ್ಲಿ ತಲೆ ಕಡಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.