ಕರ್ನಾಟಕ

karnataka

ETV Bharat / bharat

ಇಂದು ಕೇಂದ್ರ ಸರ್ವಪಕ್ಷ ಸಭೆ: ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಜೈಶಂಕರ್​​ ಮಾಹಿತಿ - ಕೇಂದ್ರ ಸರ್ವಪಕ್ಷ ಸಭೆ

ಇಂದು ನವದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ಅಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ ಕುರಿತು ಚರ್ಚೆಯಾಗಲಿದೆ.

ಇಂದು ಕೇಂದ್ರ ಸರ್ವಪಕ್ಷ ಸಭೆ: ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಜೈಶಂಕರ್​​ ಮಾಹಿತಿ
All-party meet on Afghanistan situation today

By

Published : Aug 26, 2021, 7:33 AM IST

ನವದೆಹಲಿ:ಅಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ ಕುರಿತಂತೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ಪ್ರಧಾನಿ ಮೋದಿ ಸೂಚನೆಯಂತೆ ಎಲ್ಲಾ ಪಕ್ಷಗಳ ನಾಯಕರಿಗೆ ಅಫ್ಘಾನಿಸ್ತಾನದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್​.ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್​ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಜಕೀಯ ಪಕ್ಷಗಳ ನಾಯಕರಿಗೆ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಬೆಳಗ್ಗೆ 11 ಗಂಟೆಗೆ ಮಾಹಿತಿ ನೀಡಲಿದ್ದಾರೆ. ಪಕ್ಷದ ನಾಯಕರಿಗೆ ಇಮೇಲ್ ಮೂಲಕ ಆಹ್ವಾನ ಕಳುಹಿಸಲಾಗಿದೆ. ಎಲ್ಲರೂ ಹಾಜರಾಗಬೇಕೆಂದು ವಿನಂತಿಸಲಾಗಿದೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಕುರಿತು ವಿಪಕ್ಷಗಳಿಗೆ ಮಾಹಿತಿ ನೀಡುವಂತೆ ಪ್ರಧಾನಿ ಮೋದಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಸೂಚನೆ ನೀಡಿದ್ದರು.

ಇದನ್ನೂ ಓದಿ:ಚೀನಾದ ಅಸಹಕಾರ: ಕೊರೊನಾ ವೈರಸ್ ಮೂಲ ಪತ್ತೆ ಹಚ್ಚುವ WHO ಕಾರ್ಯ ಸ್ಥಗಿತ

ABOUT THE AUTHOR

...view details