ಪ್ರಯಾಗ್ರಾಜ್ (ಉತ್ತರ ಪ್ರದೇಶ): ಮದುವೆಯಾಗಿದ್ದರೂ ಲೀವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಕಾರಣಕ್ಕೆ ಸರ್ಕಾರಿ ನೌಕರನನ್ನು ಕೆಲಸದಿಂದ ವಜಾ ಮಾಡಿರುವ ಕ್ರಮವನ್ನು ಅಲಹಾಬಾದ್ ಹೈಕೋರ್ಟ್ ಖಂಡಿಸಿದೆ. ಮತ್ತೆ ಆ ನೌಕರನನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಕೋರ್ಟ್ ಸೂಚಿಸಿದ್ದು, ಕಡಿತಗೊಂಡಿರುವ ವೇತನ ನೀಡಲಾಗುವುದಿಲ್ಲ ಎಂದು ಅರ್ಜಿದಾರನಿಗೆ ಹೇಳಿದೆ.
ಗೋರೆಲಾಲ್ ವರ್ಮಾ ಎಂಬಾತ ಸಲ್ಲಿಸಿದ್ದ ಅರ್ಜಿಯಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಭಾಟಿಯಾ ಈ ಆದೇಶ ನೀಡಿದ್ದಾರೆ. ಕೆಲಸದಿಂದ ವಜಾಗೊಳಿಸುವ ಶಿಕ್ಷೆ ತುಂಬಾ ಕಠಿಣವಾದದ್ದು ಎಂದಿರುವ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರಿ ನೌಕರರ ನಡವಳಿಕೆ ನಿಯಮಗಳು 1956 ರಕ್ಕೆ ಇದು ವಿರುದ್ಧವಾಗಿದೆ ಎಂದು ಹೇಳಿದೆ. ಇದೇ ವೇಳೆ ಅರ್ಜಿದಾರನ ಖಡಿತಗೊಂಡಿರುವ ವೇತನ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.