ಪ್ರಯಾಗರಾಜ್(ಉತ್ತರ ಪ್ರದೇಶ): ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಬುಧವಾರ ಅಲಹಾಬಾದ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. ಜೊತೆಗೆ ಗೋವನ್ನು ಧಾರ್ಮಿಕತೆಯ ದೃಷ್ಟಿಕೋನದಲ್ಲಿ ಮಾತ್ರ ನೋಡಬಾರದೆಂದು ಅಭಿಪ್ರಾಯಪಟ್ಟಿದೆ.
ಸಂಸ್ಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಗೋವಿಗೆ ರಾಷ್ಟ್ರಪ್ರಾಣಿಯ ಸ್ಥಾನಮಾನ ನೀಡಬೇಕು. ಈ ನಿಟ್ಟಿನಲ್ಲಿ ಮಸೂದೆಯನ್ನು ರಚಿಸಿ, ಸಂಸತ್ತಿನಲ್ಲಿ ಮಂಡಿಸಬೇಕು. ಗೋವುಗಳನ್ನು ರಕ್ಷಿಸಿದರೆ ಮಾತ್ರ ದೇಶ ಸಮೃದ್ಧಿಯಿಂದ ಕೂಡಿರಲು ಸಾಧ್ಯ ಎಂದು ಕೋರ್ಟ್ ಹೇಳಿದೆ.