ಪಾಲಕ್ಕಾಡ್: ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾದ ಹಿನ್ನೆಲೆ ಯುವಕನನ್ನು ಹತ್ಯೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.
ಅನೀಶ್ (29) ಹತ್ಯೆಯಾದ ಪ್ರೇಮಿ. ಈತ ತಾನು ಪ್ರೀತಿಸಿದ ಹುಡುಗಿಯನ್ನು ಮೂರು ತಿಂಗಳ ಹಿಂದೆ ಮದುವೆಯಾಗಿದ್ದನು. ಆದರೆ ಅನೀಶ್ ಕುಟುಂಬ ಆರ್ಥಿಕವಾಗಿ ದುರ್ಬಲವಾಗಿದ್ದ ಹಿನ್ನೆಲೆ ಮತ್ತು ಬೇರೆ ಜಾತಿಯಾದ ಕಾರಣ ಈ ವಿವಾಹಕ್ಕೆ ಹುಡುಗಿಯ ಕುಟುಂಬಸ್ಥರು ಒಪ್ಪಿಗೆ ನೀಡಿರಲಿಲ್ಲ.