ನವದೆಹಲಿ:ಪಂಚರಾಜ್ಯ ಚುನಾವಣೆಗಳಲ್ಲಿ ಹೀನಾಯವಾಗಿ ಸೋಲು ಕಂಡಿರುವ ಕಾಂಗ್ರೆಸ್ ಇಂದು ಕಾರ್ಯಕಾರಿ ಸಮಿತಿ ಸಭೆ(CWC) ನಡೆಸಲು ಮುಂದಾಗಿದೆ. 2024ರ ಲೋಕಸಭೆ ಚುನಾವಣೆ ಸೇರಿದಂತೆ ಪಕ್ಷದ ನಾಯಕತ್ವದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಹಾಗೂ ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷ ಮುಖಭಂಗಕ್ಕೊಳಗಾಗಿದೆ. ಈ ಬೆನ್ನಲ್ಲೇ ನಾಯಕತ್ವದ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಉಂಟಾಗಿದ್ದು, ಇಂದು ನಡೆಯಲಿರುವ ಕಾರ್ಯಾರಿ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ. ಈ ವೇಳೆ ಐದು ರಾಜ್ಯಗಳಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿದ್ದು, ಪಕ್ಷದಲ್ಲಿನ ನಾಯಕತ್ವದ ಬಗ್ಗೆ ಚರ್ಚೆ ನಡೆಯಲಿದೆ. ಭಾನುವಾರ ಸಂಜೆ 4 ಗಂಟೆಗೆ ಈ ಸಭೆ ಆರಂಭಗೊಳ್ಳಲಿದೆ.