ಕರ್ನಾಟಕ

karnataka

ETV Bharat / bharat

ಅಗ್ನಿಪಥ್ ವಿರೋಧಿ ಪ್ರತಿಭಟನೆ ಬೆನ್ನಲ್ಲೇ ಅಗ್ನಿವೀರರಿಗೆ ಉದ್ಯೋಗ ನೀಡುವುದಾಗಿ ಆಫರ್ ಕೊಟ್ಟ ಆನಂದ್ ಮಹೀಂದ್ರಾ - ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ

ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಅಗ್ನಿವೀರರಿಗೆ ತಮ್ಮ ಕಂಪನಿಗಳಲ್ಲಿ ಉದ್ಯೋಗ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಆನಂದ್ ಮಹೀಂದ್ರಾ
ಆನಂದ್ ಮಹೀಂದ್ರಾ

By

Published : Jun 20, 2022, 10:43 AM IST

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆಯೇ ಖ್ಯಾತ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ದೊಡ್ಡ ಘೋಷಣೆಯೊಂದನ್ನ ಮಾಡಿದ್ದಾರೆ. ನಾಲ್ಕು ವರ್ಷಗಳ ಸೇವೆಯ ನಂತರ ಅಗ್ನಿವೀರರಿಗೆ ತಮ್ಮ ಕಂಪನಿಗಳಲ್ಲಿ ಉದ್ಯೋಗ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಗ್ನಿಪಥ್ ಯೋಜನೆ ಘೋಷಣೆಯ ನಂತರ ನಡೆಯುತ್ತಿರುವ ಹಿಂಸಾಚಾರದಿಂದ ನನಗೆ ಬೇಸರವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪರಿಗಣಿಸಿದಾಗ, ಅಗ್ನಿವೀರರಿಗೆ ಸಿಗುವ ಶಿಸ್ತು ಮತ್ತು ಕೌಶಲ್ಯಗಳು ಅವನನ್ನು ಗಮನಾರ್ಹವಾಗಿ ಉದ್ಯೋಗಿಯನ್ನಾಗಿ ಮಾಡುತ್ತದೆ ಎಂದು ನಾನು ಹೇಳಿದ್ದೆ. ಮಹೀಂದ್ರಾ ಗ್ರೂಪ್ ಅಂತಹ ತರಬೇತಿ ಪಡೆದ ಸಮರ್ಥ ಯುವಕರಿಗೆ ನೇಮಕಾತಿ (ಉದ್ಯೋಗ) ಅವಕಾಶವನ್ನು ನೀಡುತ್ತದೆ ಎಂದಿದ್ದಾರೆ.

ನಾಯಕತ್ವ, ಟೀಂ ವರ್ಕ್ ಮತ್ತು ದೈಹಿಕ ತರಬೇತಿಯೊಂದಿಗೆ ಅಗ್ನಿವೀರ್‌ಗಳು ಉದ್ಯಮಕ್ಕೆ ಮಾರುಕಟ್ಟೆ - ಸಿದ್ಧ ವೃತ್ತಿಪರ ಪರಿಹಾರಗಳನ್ನು ಒದಗಿಸುತ್ತಾರೆ. ಪೂರೈಕೆ, ಸರಪಳಿ ನಿರ್ವಹಣೆ ಕೆಲಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಬಿಹಾರದಲ್ಲಿ ಪ್ರತಿಭಟನಾಕಾರರು ಅನೇಕ ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಬಿಹಾರ ಒಂದರಲ್ಲೇ 700 ಕೋಟಿ ರೈಲ್ವೆ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ, ಅಗ್ನಿಪಥ್ ಯೋಜನೆ ವಿರೋಧಿಸಿ ಸೇನೆಯಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವ ಅಭ್ಯರ್ಥಿಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಪ್ರತಿಪಕ್ಷಗಳೂ ಸಹ ಭಾರತ್ ಬಂದ್‌ಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿವೆ. ಬಂದ್​ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಹಾಗೂ ಹಿಂಸಾಚಾರ ಎಸಗುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಪೊಲೀಸ್​ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಅಗ್ನಿಪಥ ನೇಮಕಕ್ಕೆ ವಿರೋಧ: ಇಂದು ಭಾರತ ಬಂದ್​.. ದೇಶಾದ್ಯಂತ ಕಟ್ಟೆಚ್ಚರ

ABOUT THE AUTHOR

...view details