ಕರ್ನಾಟಕ

karnataka

ETV Bharat / bharat

ವಿಧಾನಸಭೆ ಚುನಾವಣೆ ಮೇಲೆ ಕಣ್ಣು: ಅಸ್ಸೋಂಗೆ ಬಂದಿಳಿದ ಅಮಿತ್ ಶಾ - ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸೋಂಗೆ ಬಂದಿಳಿದಿದ್ದು, ಇಂದು ಕೆಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಸ್ಸೋಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ವೇಳೆ ಅವರು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Amith Sha
Amith Sha

By

Published : Jan 23, 2021, 6:15 AM IST

ಗುವಾಹಟಿ(ಅಸ್ಸೋಂ): ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಅಸ್ಸೋಂಗೆ ಬಂದಿಳಿದಿದ್ದಾರೆ. ಕೊಕ್ರಜಾರ್​​ನಲ್ಲಿ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿ(ಬಿಟಿಸಿ) ಜತೆ ಸಭೆ ನಡೆಸಿದ ಬಳಿಕ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಓದಿ: 'ದಿ ಗ್ರೇಟ್ ಎಸ್ಕೇಪ್​': ಭಾರತದಲ್ಲಿ ಸುಭಾಷ್ ಚಂದ್ರ ಬೋಸ್​ರ ಕೊನೆ ಪ್ರಯಾಣ!

ಈ ವರ್ಷದ ಕೊನೆಯಲ್ಲಿ ಅಸ್ಸೋಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿ ಚಾಣಕ್ಯ ಬೆಳ್ಳಂಬೆಳಗ್ಗೆ ಅಸ್ಸೋಂನ ಗುವಾಹಟಿಗೆ ಆಗಮಿಸಿದ್ದಾರೆ. ನಲ್ಬರಿ ಸೇರಿದಂತೆ ಎರಡು ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ.

ಒಂದೇ ತಿಂಗಳಲ್ಲಿ ಅಮಿತ್ ಶಾ ಹಮ್ಮಿಕೊಂಡಿರುವ ಎರಡನೇ ಪ್ರವಾಸ ಇದಾಗಿದ್ದು, ಕೆಲವೊಂದು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಅಸ್ಸೋಂ ಪ್ರವಾಸ ಕೈಗೊಂಡಿದ್ದಾರೆ.

ABOUT THE AUTHOR

...view details