ಬಾರಾಮುಲ್ಲಾ (ಜಮ್ಮು ಮತ್ತು ಕಾಶ್ಮೀರ): ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳಿಂದ ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿದ್ದಾರೆ. ಬುಧವಾರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದಾಗ ಆಜಾನ್ ಕೇಳಿ ಅಮಿತ್ ಶಾ ತಮ್ಮ ಭಾಷಣವನ್ನು ನಿಲ್ಲಿಸಿ ಗೌರವ ಸಲ್ಲಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದರು. ಈ ವೇಳೆ, ಸಮೀಪದ ಮಸೀದಿಯಿಂದ ಆಜಾನ್ ಮೊಳಗಿತು. ಆಗ ತಕ್ಷಣವೇ ಅಮಿತ್ ಶಾ ತಮ್ಮ ಭಾಷಣವನ್ನು ನಿಲ್ಲಿಸಿದರು. ಈ ವೇಳೆ, ಸಭೆಯಲ್ಲಿ ನೆರೆದಿದ್ದ ಜನರು ಚಪ್ಪಾಳೆ ತಟ್ಟಿದರು.